ಹುಬ್ಬಳ್ಳಿಯ ಶ್ರೀನಿಧಿ ಹೋಟೆಲ್ನಲ್ಲಿ ತಡರಾತ್ರಿ ಯುವಕ ಮತ್ತು ಯುವತಿ ನಡುವೆ ಜಗಳ ನಡೆದು ಭಾರೀ ಹೈಡ್ರಾಮಾ ಸೃಷ್ಟಿಯಾಗಿದೆ.
ಕುಡಿತದ ಅಮಲಿನಲ್ಲಿದ್ದ ಯುವತಿ ಸಾರ್ವಜನಿಕರಿಗೆ ಏಕವಚನದಲ್ಲಿ ಬೈದಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಜಗಳ ಬಿಡಿಸಲು ಬಂದವರ ಮೇಲೂ ಆಕೆ ಹಲ್ಲೆಗೆ ಮುಂದಾಗಿದ್ದಾಳೆ.
ಸ್ಥಳದಲ್ಲಿ ಪೊಲೀಸರಿದ್ದರೂ ತಕ್ಷಣ ಮಧ್ಯಪ್ರವೇಶಿಸಲಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದ್ದು, ಈ ನಿರ್ಲಕ್ಷ್ಯವೇ ನಂತರದ ಗಲಾಟೆಗೆ ಕಾರಣವಾಯಿತಾ ಎಂಬ ಪ್ರಶ್ನೆ ಮೂಡಿದೆ.
ಪರಿಸ್ಥಿತಿ ನಿಯಂತ್ರಿಸಲು ಬಂದ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೂ ಯುವತಿ ಹಲ್ಲೆ ನಡೆಸಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾನಗರ ಠಾಣೆ ಪೊಲೀಸರು ಇಬ್ಬರನ್ನು KIMS ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದು, ಅಲ್ಲಿಯೂ ಯುವತಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾಳೆ ಎನ್ನಲಾಗಿದೆ.