ಹುಬ್ಬಳ್ಳಿಯಿಂದ ಬಿಗ್ ಬ್ರೇಕಿಂಗ್ ನ್ಯೂಸ್. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ ಬಂದಿದೆ. ಹಬ್ಬದ ದಿನವೇ ಈ ಬೆದರಿಕೆ ಬಂದಿರೋದ್ರಿಂದ ಹುಬ್ಬಳ್ಳಿ ಜನತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇಂದು ಬೆಳಿಗ್ಗೆ 11:35 ಕ್ಕೆ ಪಾಲಿಕೆ ಆಯುಕ್ತರಿಗೆ ಮೇಲ್ ಮೂಲಕ ಈ ಬೆದರಿಕೆ ಬಂದಿದೆ.
ಆ ಮೇಲ್ನಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆಯಲಾಗಿದ್ದು, ನವೆಂಬರ್ 29 ರಂದು ನಡೆಯುವ ಕಾರ್ಯಕ್ರಮದ ಸ್ಥಳದಲ್ಲಿ ಹಾಗೂ ಬೆಂಗಳೂರಿನಲ್ಲಿ ಸ್ಫೋಟದ ಬೆದರಿಕೆಯನ್ನು ಹಾಕಲಾಗಿದೆ ಎಂದು ಹೇಳಲಾಗುತ್ತಿದೆ.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಶೃತಿ ಅವರು ಮಹಾನಗರ ಪಾಲಿಕೆಗೆ ಭೇಟಿ ನೀಡಿದ್ದಾರೆ.
ಆಯುಕ್ತರ ಕಚೇರಿ ಒಳಗೆ ಪರಿಶೀಲನೆ ನಡೆಸಿದ ಡಿಸಿಪಿ ಶೃತಿ ಅವರು, ಸಿಬ್ಬಂದಿ ಬಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬೆದರಿಕೆ ಮೇಲ್ ಪರಿಶೀಲನೆ ಮಾಡುತ್ತಿರುವ ಪೊಲೀಸರು, ಮೇಲ್ ಬಂದ ಮೂಲದ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.
ಹಬ್ಬದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಾರ್ವಜನಿಕರು ಆತಂಕ ಪಡಬೇಡಿ, ಅನುಮಾನಾಸ್ಪದ ವಸ್ತು ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ.
ಈ ಕುರಿತ ಹೆಚ್ಚಿನ ಅಪ್ಡೇಟ್ ಗಾಗಿ ನೋಡ್ತಾ ಇರಿ, ನಿಮ್ಮ ನೆಚ್ಚಿನ ಈ ಟಿವಿ 24X7.