ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಹೈಡ್ರಾಮಾ ನಡೆದಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಮಹತ್ವದ ಸಭೆ ನಡೆಯಬೇಕಿತ್ತು.
ಆದರೆ ಸಭೆ ಆರಂಭಕ್ಕೂ ಮುನ್ನವೇ ಎರಡು ಬಣದ ರೈತರ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿ ಕೋಲಾಹಲ ಸೃಷ್ಟಿಯಾಗಿದೆ. ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ತಕ್ಷಣ ಎಚ್ಚೆತ್ತ ಪೊಲೀಸರು ಗಲಾಟೆ ಮಾಡಿದ ಇಬ್ಬರು ರೈತರನ್ನು ಸಭೆಯಿಂದ ಬಲವಂತವಾಗಿ ಹೊರಗೆ ಎಳೆದುಕೊಂಡು ಹೋದರು.
ಪರಿಸ್ಥಿತಿ ನಿಯಂತ್ರಿಸಲು ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಮತ್ತು ಡಿಸಿಪಿ ನಾರಾಯಣ ಬರಮನಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.