ಹುಬ್ಬಳ್ಳಿ-ಧಾರವಾಡ ವಾಹನ ಸವಾರರಿಗೆ ಬಿಗ್ ಅಲರ್ಟ್! ಕಬ್ಬಿನ ಬೆಂಬಲ ಬೆಲೆಗಾಗಿ ರೈತರು ಇಂದು ಯರಿಕೊಪ್ಪ ಕ್ರಾಸ್ ನಲ್ಲಿ ಬೃಹತ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಹುಬ್ಬಳ್ಳಿ-ಧಾರವಾಡದ ಪ್ರಮುಖ 7 ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಬದಲಾಗಿದೆ. ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಘೋಷಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡದ ಯರಿಕೊಪ್ಪ ಕ್ರಾಸ್ ನಲ್ಲಿ ರೈತ ಸಂಘಟನೆಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಹೈವೇ ತುಂಬಾ ಟ್ರ್ಯಾಕ್ಟರ್ ಗಳನ್ನು ನಿಲ್ಲಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
ಇದರಿಂದ ಬೆಳಗಾವಿ ಕಡೆಯಿಂದ ಬರುವ ವಾಹನಗಳು, ಧಾರವಾಡದಿಂದ ಹುಬ್ಬಳ್ಳಿಗೆ ಬರುವ ವಾಹನಗಳಿಗೆ ತೀವ್ರ ತೊಂದರೆಯಾಗಿದೆ. ಪರಿಸ್ಥಿತಿ ನಿಭಾಯಿಸಲು ಹುಬ್ಬಳ್ಳಿ-ಧಾರವಾಡ ಸಂಚಾರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ 7 ಪ್ರಮುಖ ಮಾರ್ಗಗಳಲ್ಲಿ ಸಂಚಾರ ಬದಲಾವಣೆ ಮಾಡಿದ್ದಾರೆ.